ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಹಲವು ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಈ ಅಡ್ಡ ಮತದಾನದ ಎಫೆಕ್ಟ್ ನಿಂದಾಗಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯೇ ಪರಾಭವಗೊಂಡು ಬಿಜೆಪಿ ಮತ್ತದರ ಮಿತ್ರ ಪಕ್ಷದ ಬೆಂಬಲದೊಂದಿಗೆ ಕಣಕ್ಕಿಳಿದಿದ್ದ ಕಾರ್ತಿಕೇಯ ಶರ್ಮಾ ವಿಜಯ ಸಾಧಿಸಿದ್ದಾರೆ.
ಇಂತದೊಂದು ಘಟನೆ ನಡೆದಿರೋದು ಹರಿಯಾಣದಲ್ಲಿ. ಕಾಂಗ್ರೆಸ್ ಶಾಸಕ ಕುಲದೀಪ್ ಬಿಷ್ಣೋಯಿ ಅಡ್ಡ ಮತದಾನ ಮಾಡಿದವರಾಗಿದ್ದು, ಇದೀಗ ಕಾಂಗ್ರೆಸ್ ಪಕ್ಷದಿಂದ ಅವರನ್ನು ಅಮಾನತುಗೊಳಿಸಲಾಗಿದೆ.
ಕರ್ನಾಟಕದಲ್ಲೂ ಜೆಡಿಎಸ್ ಶಾಸಕರೊಬ್ಬರು ಬಹಿರಂಗವಾಗಿಯೇ ತಾವು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರುವುದಾಗಿ ಹೇಳಿಕೊಂಡಿದ್ದರು. ಜೆಡಿಎಸ್ ನಾಯಕರು ಅವರ ವಿರುದ್ದ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.