ಮಂಗಳೂರು: ರಾಜ್ಯಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಕಳೆದ ಕೆಲ ತಿಂಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಕರ್ ಫರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಆಸ್ಕರ್ ಫರ್ನಾಂಡಿಸ್ ಜುಲೈ 18ರಂದು ಯೋಗ ಮಾಡುತ್ತಿದ್ದಾಗ ಮನೆಯಲ್ಲಿಯೇ ಜಾರಿ ಬಿದ್ದಿದ್ದರು. ಎಂದಿನಂತೆ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ತೆರಳಿದಾಗ ತಲೆಗೆ ಪೆಟ್ಟಾಗಿರುವುದು ತಿಳಿದುಬಂದಿತ್ತು.
1941, ಮಾರ್ಚ್ 27ರಂದು ಉಡುಪಿಯಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್ 1980ರಲ್ಲಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಮೊದಲಬಾರಿ ಸಂಸತ್ ಪ್ರವೇಶಿಸಿದ್ದರು. ಆಸ್ಕರ್ ಫರ್ನಾಂಡಿಸ್ 5 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಕೇಂದ್ರ ಸಾರಿಗೆ ಹಾಗೂ ಕಾರ್ಮಿಕ ಸಚಿವರಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.