ಬೆಂಗಳೂರು: ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.
ತರಗತಿಗಳನ್ನು ಬಹಿಷ್ಕರಿಸಿರುವ 444 ಕ್ಕೂ ಹೆಚ್ಚು ಕಾಲೇಜಿನ 11 ಸಾವಿರ ಉಪನ್ಯಾಸಕರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಕನಿಷ್ಠ ವೇತನ, ಸೇವಾ ಆಧಾರದ ಮೇಲೆ ಖಾಯಮಾತಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.
RBI ನಿಂದ ವಿಶೇಷ ಸ್ಥಾನಮಾನಕ್ಕೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಭಾಜನ
ಬೇಡಿಕೆ ಈಡೇರಿಸದಿದ್ದರೆ ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆಗೆ ನಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಅತಿಥಿ ಉಪನ್ಯಾಸಕರು ಎಚ್ಚರಿಕೆ ನೀಡಿದ್ದಾರೆ.