alex Certify ರಾಜ್ಯೋತ್ಸವ ದಿನದಂದು ಪುನೀತ್ ರಾಜಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯೋತ್ಸವ ದಿನದಂದು ಪುನೀತ್ ರಾಜಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿನಯದ ‘ಗಂಧದಗುಡಿ’ ಸಿನಿಮಾ ವಿಶ್ವದಾದ್ಯಂತ ಇಂದು ತೆರೆಕಂಡಿದ್ದು, ಪ್ರೇಕ್ಷಕರು ವೀಕ್ಷಣೆಗಾಗಿ ಮುಗಿಬಿದ್ದಿದ್ದಾರೆ. ರಾಜ್ಯದಲ್ಲಿ ಇನ್ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಚಿತ್ರ ತೆರೆ ಕಂಡಿದ್ದು, ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.

ಇದರ ಮಧ್ಯೆ ಸರ್ಕಾರ ಮತ್ತೊಂದು ಮಹತ್ವದ ಮಾಹಿತಿ ನೀಡಿದ್ದು ನವೆಂಬರ್ 1 ರ ಕನ್ನಡ ರಾಜ್ಯೋತ್ಸವ ದಿನದಂದು ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಅಂದು ಸಂಜೆ ನಾಲ್ಕು ಗಂಟೆಗೆ ವಿಧಾನಸೌಧದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ರಾಜಕುಮಾರ್ ಕುಟುಂಬಸ್ಥರೊಂದಿಗೆ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್, ಜೂನಿಯರ್ ಎನ್ಟಿಆರ್, ಚಂದ್ರಶೇಖರ ಕಂಬಾರ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...