alex Certify ರಾಜ್ಯೋತ್ಸವ ದಿನದಂದೇ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್; ‘ಯಶಸ್ವಿನಿ’ ಯೋಜನೆಗೆ ಇಂದಿನಿಂದಲೇ ನೋಂದಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯೋತ್ಸವ ದಿನದಂದೇ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್; ‘ಯಶಸ್ವಿನಿ’ ಯೋಜನೆಗೆ ಇಂದಿನಿಂದಲೇ ನೋಂದಣಿ

ರೈತರು ಹಾಗೂ ಸಹಕಾರಿಗಳಿಗೆ ಅತ್ಯಂತ ಅನುಕೂಲಕರವಾಗಿರುವ ಯಶಸ್ವಿನಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಮರು ಜಾರಿಗೊಳಿಸಲಾಗಿದ್ದು, ಇದರ ನೋಂದಣಿ ಪ್ರಕ್ರಿಯೆ ಇಂದಿನಿಂದಲೇ ಆರಂಭವಾಗುತ್ತಿದೆ.

ಯಶಸ್ವಿನಿ ಯೋಜನೆಯಡಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂಪಾಯಿಗಳವರೆಗಿನ ವೈದ್ಯಕೀಯ ವೆಚ್ಚವನ್ನು ಭರಿಸಲಾಗುತ್ತಿದ್ದು, ಇದಕ್ಕಾಗಿ ಈಗಾಗಲೇ ನೂರಾರು ನೆಟ್ವರ್ಕ್ ಆಸ್ಪತ್ರೆಗಳನ್ನು ಗುರುತಿಸಲಾಗಿದೆ.

2003 – 04 ರಲ್ಲಿ ಯಶಸ್ವಿನಿ ಯೋಜನೆ ಆರಂಭವಾಗಿದ್ದು, ಲಕ್ಷಾಂತರ ಮಂದಿ ಇದರ ಪ್ರಯೋಜನ ಪಡೆದುಕೊಂಡಿದ್ದರು. ಬಳಿಕ 2017-18ರಲ್ಲಿ ಈ ಯೋಜನೆಯನ್ನು ಆರೋಗ್ಯ ಕರ್ನಾಟಕ ಜೊತೆ ವಿಲೀನಗೊಳಿಸಲಾಗಿತ್ತು.

ಆದರೆ ಇದರಿಂದ ಹೆಚ್ಚಿನ ಪ್ರಯೋಜನವಾಗದ ಕಾರಣ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕುರಿತಂತೆ ಘೋಷಣೆ ಹೊರಡಿಸಿದ್ದು, ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭವಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...