ತುಮಕೂರು: ಸುದ್ದಿಗೊಷ್ಠಿ ವೇಳೆ ಎಡವಟ್ಟು ಮಾಡಿಕೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಉಳಿಸಲು ಕಾಂಗ್ರೆಸ್ ಪಕ್ಷವನ್ನೇ ತೆಗೆಯಬೇಕು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಬಿಜೆಪಿಯನ್ನು ತೆಗೆಯಬೇಕು ಎಂದು ಹೇಳುವ ಬದಲು ಬಾಯಿತಪ್ಪಿನಿಂದ ಕಾಂಗ್ರೆಸ್ ಪಕ್ಷವನ್ನು ರಾಜ್ಯದಿಂದ ತೆಗೆಯಬೇಕು ಎಂದು ಹೇಳಿದ್ದಾರೆ.
ಎಸ್.ಆರ್. ಪಾಟೀಲ್ ಹೇಳಿದ ಬಳಿಕ ತಕ್ಷಣ ಸರಿಪಡಿಸಿಕೊಂಡು ಬಿಜೆಪಿಯನ್ನು ರಾಜ್ಯದಿಂದ ತೆಗೆಯಬೇಕು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವಿದೆ. ಸಿಎಂ ಯಡಿಯೂರಪ್ಪ ಬದಲಾವಣೆಯಾಗಲಿದ್ದಾರೆ. ಯಡಿಯೂರಪ್ಪ ಬಳಿಕ ಮತ್ತೋರ್ವ ಭ್ರಷ್ಟ ಸಿಎಂ ಆಗುತ್ತಾರೆ. ಐಎಎಸ್ ಅಧಿಕಾರಿಯಿಂದ ಹಿಡಿದು ಪ್ರತಿಯೊಬ್ಬ ಅಧಿಕಾರಿ ವರ್ಗಾವಣೆಗೂ ಲಂಚ ತೆಗೆದುಕೊಂಡು ಪೋಸ್ಟಿಂಗ್ ಕೊಡುತ್ತಾರೆ. ಕೊರೊನಾದಿಂದ ಆರ್ಥಿಕ ಸಂಕಷ್ಟ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ ಹೊರತು ಅಭಿವೃದ್ಧಿ ಕಾರ್ಯಗಳಿಗೆ ನಯಾಪೈಸೆ ಹಣ ಬಿಡುಗಡೆ ಮಾಡುತ್ತಿಲ್ಲ ಇಂತಹ ಭ್ರಷ್ಟ ಸರ್ಕಾರದಿಂದ ರಾಜ್ಯಕ್ಕೆ ಉಳಿಗಾಲವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.