ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಸ್ಥಾನದ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ. ಇಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು ಈಗಾಗಲೇ, ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ಚುನಾವಣಾಧಿಕಾರಿ ಜಿಯಾವುಲ್ಲಾ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದ್ದು ಮಧ್ಯಾಹ್ನ ಮೂರು ಗಂಟೆಯೊಳಗೆ ಒಕ್ಕಲಿಗ ಸಂಘದ ಹೊಸ ಅಧ್ಯಕ್ಷರ ಆಯ್ಕೆಯಾಗಲಿದೆ.
ಚುನಾವಣೆ ಹಿನ್ನೆಲೆ, ಅಧ್ಯಕ್ಷ, ಉಪಾಧ್ಯಕ್ಷ, ಸಹಾಯಕ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಸ್ಥಾನಕ್ಕೆ ಗೆದ್ದ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಬಿ.ಕೆಂಚಪ್ಪ ಗೌಡ ಮತ್ತು ಶಾಸಕ ಸಿ.ಎನ್ ಬಾಲಕೃಷ್ಣ ನಾಮ ಪತ್ರ ಸಲ್ಲಿಸಿದ್ದು, ಇವರಿಬ್ಬರ ನಡುವೆ ಟಫ್ ಫೈಟ್ ಏರ್ಪಟ್ಟಿದೆ.
ಉಪಾಧ್ಯಕ್ಷ ಸ್ಥಾನಕ್ಕೆ ಸಿಜಿ ಗಂಗಾಧರ್, ಡಾ ರೇಣುಕಾ ಪ್ರಸಾದ್, ಎಲ್ ಶ್ರೀನಿವಾಸ್ ಡಿ. ಹನುಮಂತಯ್ಯ ನಾಮ ಪತ್ರ ಸಲ್ಲಿಸಿದ್ದಾರೆ. ಸಹಾಯಕ ಕಾರ್ಯದರ್ಶಿ ಸ್ಥಾನಕ್ಕೆ ಎಂ.ಬಿ.ಮಂಜೇಗೌಡ ಹಾಗೂ ರಾಘವೇಂದ್ರ ರವರು, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹೆಚ್. ಎನ್. ಅಶೋಕ್ ಹಾಗೂ ಟಿ ಕೋನಪ್ಪರೆಡ್ಡಿ ಹಾಗೂ ಖಜಾಂಚಿ ಸ್ಥಾನಕ್ಕೆ ಅಶೋಕ್ ಎಸ್ .ಡಿ. ಜಯರಾಮ್ ಹಾಗೂ ಆರ್ ಪ್ರಕಾಶ್ ನಾಮಪತ್ರ ಸಲ್ಲಿಸಿದ್ದಾರೆ. ಇವರಲ್ಲಿ ಅಧಿಕಾರ ಯಾರಿಗೆ ಒಲಿಯುತ್ತದೆ ಎಂಬ ಕುತೂಹಲ ಸೃಷ್ಟಿಯಾಗಿದೆ.