ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಹಿ ನೀರು ಸಂಗ್ರಹ ಕಾರ್ ಲ್ಯಾಂಡ್ ಯೋಜನೆಗೆ ಅನುಮೋದನೆ ನೀಡಲಾಗಿದೆ. ಹೆಬ್ರಿ ತಾಲೂಕಿನಲ್ಲಿ ಹೊಸ ಹೋಬಳಿ ನಿರ್ಮಾಣಕ್ಕೆ ಸಮ್ಮತಿ ನೀಡಲಾಗಿದೆ ಎಂದರು.
ಸರ್ಕಾರಿ ಆಸ್ಪತ್ರೆಯಲ್ಲಿ ಇದೆಂತಾ ದುಃಸ್ಥಿತಿ..? ಹಾಳೆ ಮೇಲೆ ಎಕ್ಸ್ ರೇ ವರದಿ ಮುದ್ರಣ..!
ಮಂಡ್ಯ ಶುಗರ್ ಕಾರ್ಖಾನೆ ಪ್ರಾರಂಭದ ಬಗ್ಗೆ ಸರ್ಕಾರವೇ ಕಾರ್ಖಾನೆ ನಡೆಸಬೇಕಾ ಅಥವಾ ಖಾಸಗಿಯವರಿಗೆ ನೀಡಬೇಕಾ ಎಂಬ ಬಗ್ಗೆ ಸಮಗ್ರ ಚರ್ಚೆ ನಡೆದಿದ್ದು, ಕ್ಯಾಬಿನೆಟ್ ಸಬ್ ಕಮಿಟಿ ರಚನೆ ಮಾಡಲಾಗಿದೆ. ಸಚಿವರಾದ ನಾರಾಯಣಗೌಡ, ಗೋವಿಂದ ಕಾರಜೋಳ, ಆರ್. ಅಶೋಕ್, ಶಂಕರಗೌಡ ಮುನೇನಕೊಪ್ಪ ಕಮಿಟಿ ನೇತೃತ್ವ ವಹಿಸಲಿದ್ದಾರೆ ಎಂದರು.
ರಾಜ್ಯ ಪೊಲೀಸ್ ನೇಮಕಾತಿ ತಿದ್ದುಪಡಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದ್ದು, ಪೊಲೀಸ್ ಅಧಿಕಾರಿಗಳು ಬಡ್ತಿ ಪಡೆಯಲು ನಿಗದಿಪಡಿಸಲಾಗಿದ್ದ 5 ವರ್ಷಗಳ ಅವಧಿಯನ್ನು 4 ವರ್ಷಗಳಿಗೆ ಇಳಿಸಲಾಗಿದೆ ಎಂದು ಹೇಳಿದರು.