ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಭಾರತ್ ಜೋಡೋ’ ಯಾತ್ರೆ ಕೈಗೊಂಡಿರುವ ರಾಹುಲ್ ಗಾಂಧಿ ನೇತೃತ್ವದ ತಂಡ ಇಂದು ತಮಿಳುನಾಡಿನಿಂದ ಬಂಡಿಪುರ ಅರಣ್ಯ ಪ್ರದೇಶದ ಮೂಲಕ ಕರ್ನಾಟಕ ಪ್ರವೇಶಿಸಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ಕೆಕ್ಕನಹಳ್ಳ ಚೆಕ್ ಪೋಸ್ಟ್ ಗೆ ತೆರಳಿ ಸ್ವಾಗತಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರುಗಳಾದ ಎಂ.ಬಿ. ಪಾಟೀಲ್, ಆರ್.ವಿ. ದೇಶಪಾಂಡೆ, ವೀರಪ್ಪ, ಮೊಯ್ಲಿ, ಕೆ.ಜೆ. ಜಾರ್ಜ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನ ಘಟಾನುಘಟಿ ನಾಯಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕೆಲವೇ ಹೊತ್ತಿನಲ್ಲಿ ಗುಂಡ್ಲುಪೇಟೆಯಲ್ಲಿ ಪಾದಯಾತ್ರೆ ಆರಂಭವಾಗಲಿದ್ದು, ಬಳಿಕ ಅಂಬೇಡ್ಕರ್ ಭವನದ ಎದುರಿನ ಜಾಗದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಸೋಲಿಗರು ಹಾಗೂ ಆಕ್ಸಿಜನ್ ದುರಂತ ಸಂತ್ರಸ್ತರ ಜೊತೆ ಸಂವಾದ ನಡೆಸಲಿದ್ದಾರೆ.