ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದು, ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡದಂತೆ ತಿಳಿಸಿದ್ದಾರೆ.
ಸಿಡಿ ಕೇಸ್ ಗೆ ಮೆಗಾ ಟ್ವಿಸ್ಟ್; ಎಸ್ಐಟಿ ತನಿಖೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಯುವತಿ
ನಾಯಕತ್ವ ಬದಲಾವಣೆ ಮಾತುಗಳು ಕೇಳುತ್ತಿದ್ದ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುವುದಾಗಿ ಹೇಳಿ ಹೊಸ ಬಾಂಬ್ ಸಿಡಿಸಿದ್ದರು. ಈ ಎಲ್ಲಾ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ನಾಯಕರ ಸಂಘರ್ಷಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಹೈಕಮಾಂಡ್, ನಾಯಕತ್ವ ಬದಲಾವಣೆ ಬಗ್ಗೆ ಸಚಿವರಾಗಲಿ, ಶಾಸಕರಾಗಲಿ, ಯಾರೂ ಕೂಡ ಜೂನ್ 14ರವರೆಗೆ ಹೇಳಿಕೆ ನೀಡುವಂತಿಲ್ಲ. ಸರ್ಕಾರದ ಹಾಗೂ ಪಕ್ಷದ ಇಮೇಜ್ ಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು ಎಂದು ಸೂಚಿಸಿದೆ ಎನ್ನಲಾಗಿದೆ.
ಸಿಎಂ ಯಡಿಯೂರಪ್ಪ ಮಾಡುತ್ತಿರುವುದು ಹೊಸ ನಾಟಕ; ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ; ಸಿದ್ದರಾಮಯ್ಯ ಆಕ್ರೋಶ
ಈ ಮೂಲಕ ಬಿಜೆಪಿ ಹೈಕಮಾಂಡ್ ತಾತ್ಕಾಲಿಕ ಕದನ ವಿರಾಮ ಘೋಷಿಸಿದ್ದು, ಆದರೆ ಜೂನ್ 14ರ ಬಳಿಕ ವರಿಷ್ಠರ ನಡೆಯೇನಿರಬಹುದು ಎಂಬುದು ಕುತೂಹಲ ಕೆರಳಿಸಿದೆ.