alex Certify ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಎಂಟ್ರಿ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಎಂಟ್ರಿ ಫಿಕ್ಸ್

ಮಂಡ್ಯ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಆಗಮನ ಬಹುತೇಕ ಖಚಿತವಾಗಿದೆ.

ಜನವರಿ 31ರಂದು ಸುಮಲತಾ ಬೆಂಬಲಿಗರ ಸಭೆ ನಡೆದಿತ್ತು. ಸಭೆಯಲ್ಲಿ ಸುಮಲತಾ ರಾಜ್ಯ ರಾಜಕಾರಣಕ್ಕೆ ಬರಬೇಕು ಎಂದು ಒತ್ತಾಯಿಸಲಾಗಿತ್ತು. ಬೆಂಬಲಿಗರ ಒತ್ತಾಯಕ್ಕೆ ಮಣಿದ ಸುಮಲತಾ, ರಾಜ್ಯ ರಾಜಕಾರಣಕ್ಕೆ ಬರಲು ಒಪ್ಪಿದ್ದಾರೆ ಎನ್ನಲಾಗಿದೆ.

ಅಲ್ಲದೇ ಪತಿ ಅಂಬರೀಷ್ ಪ್ರತಿನಿಧಿಸಿದ್ದ ಮಂಡ್ಯ ಕ್ಷೇತ್ರದಿಂದ ಸುಮಲತಾ ಸ್ಪರ್ಧೆಗೆ ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಪಕ್ಷದ ಬಗ್ಗೆ ಮಾತ್ರ ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...