ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾವೇರಿಯಲ್ಲಿ ಆಡಿರುವ ಮಾತೊಂದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಹಾವೇರಿ ಜಿಲ್ಲೆಯ ಬಿಜೆಪಿ ಶಾಸಕರುಗಳು ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದು ನಾನೇ ಸ್ವಲ್ಪ ಕಾಲ ತಡೆಯಿರಿ ಎಂದು ಅವರಿಗೆ ಹೇಳಿದ್ದೇನೆಂದು ಶಿವಕುಮಾರ್ ತಿಳಿಸಿದ್ದಾರೆ.
ಯಡಿಯೂರಪ್ಪ ಬಲಗೈ ಬಂಟ, ಬೊಮ್ಮಾಯಿ ಬಲಗೈ ಬಂಟ ಕಾಂಗ್ರೆಸ್ ಪಕ್ಷಕ್ಕೆ ಬರುತ್ತೇನೆ ಎಂದು ಹೇಳುತ್ತಿದ್ದಾರೆ. ಸದ್ಯಕ್ಕೆ ನನ್ನ ಹತ್ತಿರ ಜಾಗ ಇಲ್ಲ ಸ್ವಲ್ಪ ತಡೆಯಿರಿ ಎಂದು ನಾನು ಅವರಿಗೆ ತಿಳಿಸಿದ್ದೇನೆ ಎಂದು ಹೇಳಿರುವ ಡಿ.ಕೆ. ಶಿವಕುಮಾರ್ ಸ್ವಲ್ಪ ದಿನ ಹೋದಮೇಲೆ ಪಟ್ಟಿ ಹೇಳುತ್ತೇನೆ ಎಂದಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ಈ ಮಾತಿನಿಂದ ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾವೇರಿಯಿಂದಲೇ ಕಾಂಗ್ರೆಸ್ ‘ಆಪರೇಷನ್ ಹಸ್ತ’ ಮಾಡಲು ಮುಂದಾಗಿದೆಯಾ ಎಂಬ ಅನುಮಾನ ಮೂಡಿದೆ. ಕೆಲವೊಂದು ಮೂಲಗಳ ಪ್ರಕಾರ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.