
ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿಯೂ ಮಾಲ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದ್ದು, ಒಂದೇ ಸೂರಿನಡಿ ರಿಯಾಯಿತಿ ದರದಲ್ಲಿ ಗೃಹೋಪಯೋಗಿ ವಸ್ತುಗಳು ಲಭ್ಯವಾಗುವಂತೆ ಮಾಡಲಾಗುತ್ತದೆ.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಸಾಗರದಲ್ಲಿ ಮಾತನಾಡುವ ವೇಳೆ ಈ ವಿಷಯ ತಿಳಿಸಿದ್ದು, ಶಿವಮೊಗ್ಗದಲ್ಲಿ 22 ಕೋಟಿ ರೂಪಾಯಿ ಅನುದಾನದಲ್ಲಿ ಈಗಾಗಲೇ ಬೃಹತ್ ಭವನ ನಿರ್ಮಾಣವಾಗುತ್ತಿದ್ದು, ಇತರ ಜಿಲ್ಲೆಗಳಲ್ಲಿಯೂ ಇಂತಹ ಮಾಲ್ ತೆರೆಯಲು 200 ಕೋಟಿ ರೂಪಾಯಿಗಳ ಯೋಜನೆ ರೂಪಿಸಲಾಗುತ್ತದೆ ಎಂದು ಹೇಳಿದರು.
ಉದ್ಯೋಗಿಗಳಿಗೆ ಫೆಸ್ಟಿವಲ್ ಬೋನಸ್ ದೇಶದ ಇತರೆ ರಾಜ್ಯಗಳಲ್ಲಿ 10,000 ರೂಪಾಯಿಗಳಿದ್ದರೆ ಕರ್ನಾಟಕದಲ್ಲಿ 25,000 ರೂಪಾಯಿ ನೀಡಲಾಗುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.