ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು – 2022ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಯೋಜನೆಗೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಅನುಷ್ಟಾನಕ್ಕೆ ಬರಲಿದೆ ಎಂದರು.
ಈ ವರ್ಷದಲ್ಲಿ 7 ನೇ ವೇತನ ಆಯೋಗ ರಚಿಸಿ, ಸರ್ಕಾರಿ ನೌಕರರ ವೇತನದ ತಾರತಮ್ಯವನ್ನು ಸರಿದೂರಿಸಲು ತೀರ್ಮಾನಿಸಲಾಗಿದೆ ಎಂದೂ ಕೂಡಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.