alex Certify ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್‌ ನ್ಯೂಸ್:‌ ನಗದುರಹಿತ ಚಿಕಿತ್ಸೆ ಒದಗಿಸುವ ʼಕರ್ನಾಟಕ ಆರೋಗ್ಯ ಸಂಜೀವಿನಿʼ ಯೋಜನೆಗೆ ಶೀಘ್ರದಲ್ಲೇ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್‌ ನ್ಯೂಸ್:‌ ನಗದುರಹಿತ ಚಿಕಿತ್ಸೆ ಒದಗಿಸುವ ʼಕರ್ನಾಟಕ ಆರೋಗ್ಯ ಸಂಜೀವಿನಿʼ ಯೋಜನೆಗೆ ಶೀಘ್ರದಲ್ಲೇ ಚಾಲನೆ

ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು – 2022ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಯೋಜನೆಗೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಅನುಷ್ಟಾನಕ್ಕೆ ಬರಲಿದೆ ಎಂದರು.

ಈ ವರ್ಷದಲ್ಲಿ 7 ನೇ ವೇತನ ಆಯೋಗ ರಚಿಸಿ, ಸರ್ಕಾರಿ ನೌಕರರ ವೇತನದ ತಾರತಮ್ಯವನ್ನು ಸರಿದೂರಿಸಲು ತೀರ್ಮಾನಿಸಲಾಗಿದೆ ಎಂದೂ ಕೂಡಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...