alex Certify ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕರ್ತವ್ಯನಿರತ ಹಾಗೂ ನಿವೃತ್ತ ಸೈನಿಕರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ರಿಯಾಯ್ತಿ ದರದಲ್ಲಿ ಅಗತ್ಯ ವಸ್ತುಗಳನ್ನು ಒದಗಿಸುತ್ತಿರುವ ನಿಟ್ಟಿನಲ್ಲಿ ಕ್ಯಾಂಟೀನ್ ಸ್ಟೋರ್ಸ್‌ ಡಿಪಾರ್ಟ್‌ಮೆಂಟ್ ಇರೋದು ಗೊತ್ತಿರೋ ವಿಚಾರ. ಇದೇ ಮಾದರಿಯಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ರಿಯಾಯಿತಿ ದರದಲ್ಲಿ ಅಗತ್ಯ ವಸ್ತುಗಳನ್ನು ನೀಡಲು ಚಿಂತನೆ ನಡೆಸಿದೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ.

ಹೌದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಶೀಘ್ರದಲ್ಲಿಯೇ ಈ ಯೋಜನೆ ಜಾರಿಗೆ ತರಲು ನಿರ್ಧಾರ ಮಾಡಿದೆ. ಇಲ್ಲಿ ದಿನಬಳಕೆ ವಸ್ತುಗಳು, ದಿನಸಿ, ಎಲೆಕ್ಟ್ರಾನಿಕ್ ಉಪಕರಣಗಳು ಮತ್ತಿತರ ವಸ್ತುಗಳು ರಿಯಾಯ್ತಿಯಲ್ಲಿ ದೊರೆಯುತ್ತವೆಯಂತೆ. ಇದರ ಮೊದಲ ಮಳಿಗೆ ಶಿವಮೊಗ್ಗದಲ್ಲಿ ಆರಂಭ ಆಗಲಿದೆ. ಫೆ 4ರಂದು ರಾಜ್ಯಮಟ್ಟದ ಸರ್ಕಾರಿ ನೌಕರರ ಸಮ್ಮೇಳನ ಕರೆದಿದ್ದು ಇದೇ ಕಾರ್ಯಕ್ರಮದಲ್ಲಿ ಮಳಿಗೆಯನ್ನೂ ಉದ್ಘಾಟಿಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದ್ದಾರೆ. ಇದೇ ಮಾದರಿಯ ಮಳಿಗೆಗಳನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಸರ್ಕಾರಿ ಜಾಗದಲ್ಲೇ ಈ ಮಳಿಗೆಗಳು ಪ್ರಾರಂಭ ಆಗಲಿದೆಯಂತೆ. ಬೆಂಗಳೂರಿನಲ್ಲಿ ಇಂಥ 4 ಮಳಿಗೆಗಳನ್ನು ಸ್ಥಾಪಿಸಲು ಚಿಂತಿಸಲಾಗಿದೆ. ಆದರೆ ಭೂಮಿ ಸಮಸ್ಯೆ ಇದೆಯಂತೆ. ಭೂಮಿ ಸಿಕ್ಕ ತಕ್ಷಣವೇ ಸ್ಥಾಪಿಸಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ, ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಪ್ರಸ್ತುತ ಕರ್ನಾಟಕ ಸರ್ಕಾರದಲ್ಲಿ 72 ಇಲಾಖೆಗಳಿದ್ದು, 5.2 ಲಕ್ಷ ನೌಕರರು ಕೆಲಸ ಮಾಡುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...