alex Certify ರಾತ್ರಿ ʼಸ್ನಾನʼ ಮಾಡೋದ್ರಿಂದ ಏನು ಲಾಭ ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ʼಸ್ನಾನʼ ಮಾಡೋದ್ರಿಂದ ಏನು ಲಾಭ ಗೊತ್ತಾ…?

 

ಜೀವನ ಶೈಲಿ ಸಂಪೂರ್ಣ ಬದಲಾಗಿದೆ. ಬೆಳಗಿನಿಂದ ರಾತ್ರಿಯವರೆಗೆ ಎಲ್ಲರೂ ಬ್ಯುಸಿ. ಒತ್ತಡದಲ್ಲಿ ಕೆಲಸ ಮಾಡುವ ಜನರ ಮೇಲೆ ಕಲುಷಿತ ವಾತಾವರಣ ಆರೋಗ್ಯವನ್ನು ಇನ್ನಷ್ಟು ಹದಗೆಡಿಸುತ್ತದೆ. ಸುಸ್ತಾಗಿ ಮನೆಗೆ ಬರುವ ಅನೇಕರು ರಾತ್ರಿ ಸ್ನಾನ ಮಾಡ್ತಾರೆ. ರಾತ್ರಿ ಮಾಡುವ ಸ್ನಾನದಿಂದ ಬಹಳಷ್ಟು ಲಾಭಗಳಿವೆ.

ತಣ್ಣನೆಯ ನೀರಿನಲ್ಲಿ ಸ್ನಾನ ಮಾಡುವುದರಿಂದ ಮನಸ್ಸಿಗೆ ಹಿತವೆನಿಸುತ್ತದೆ. ಇದರಿಂದ ದೇಹದ ಸೌಂದರ್ಯ ಕೂಡ ವೃದ್ಧಿಯಾಗುತ್ತದೆ.

ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ರಕ್ತ ಸಂಚಾರ ಸುಲಭವಾಗುತ್ತದೆ. ಸ್ನಾನ ಮಾಡುವುದರಿಂದ ನಿಮ್ಮ ಒತ್ತಡ ಕಡಿಮೆಯಾಗುತ್ತದೆ. ಒಳ್ಳೆಯ ನಿದ್ರೆ ಬರುತ್ತೆ.

ತಣ್ಣನೆಯ ಅಥವಾ ಬಿಸಿಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಕ್ಯಾಲೋರಿ ಬರ್ನ್ ಆಗುತ್ತದೆ. ಇದರಿಂದ ಬೊಜ್ಜು ಕರಗುತ್ತದೆ.

ತಣ್ಣನೆಯ ನೀರಿನಲ್ಲಿ ಸ್ನಾನ ಮಾಡುವುದರಿಂದ ಚರ್ಮ ಹೊಳಪು ಪಡೆಯುತ್ತದೆ. ಮೊಡವೆ ಸಮಸ್ಯೆ ನಿಮ್ಮನ್ನು ಕಾಡ್ತಾ ಇದ್ದರೆ, ತಣ್ಣನೆಯ ನೀರಿನಲ್ಲಿ ಸ್ನಾನ ಮಾಡಿ.

ಪ್ರತಿದಿನ ರಾತ್ರಿ ಸ್ನಾನ ಮಾಡುವುದರಿಂದ ಪ್ರತಿರಕ್ಷಣಾ ಶಕ್ತಿ ಹೆಚ್ಚಾಗುತ್ತದೆ.

ನಿಮಗೆ ಅಧಿಕ ರಕ್ತದೊತ್ತಡ ಸಮಸ್ಯೆ ಇದ್ದರೆ ರಾತ್ರಿ ಸ್ನಾನ ಮಾಡುವುದು ಒಳ್ಳೆಯದು. ಇದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...