alex Certify ವಿಶ್ವದ ಏಕೈಕ ‘ಸಂಸ್ಕೃತ’ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವದ ಏಕೈಕ ‘ಸಂಸ್ಕೃತ’ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ಇನ್ನಿಲ್ಲ

World's only Sanskrit daily editor Sampath Kumar no moreವಿಶ್ವದ ಏಕೈಕ ಸಂಸ್ಕೃತ ಪತ್ರಿಕೆ ಎಂಬ ಹೆಗ್ಗಳಿಕೆ ಹೊಂದಿರುವ ‘ಸುಧರ್ಮಾ’ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿರುವ ತಮ್ಮ ಕಚೇರಿಯಲ್ಲಿದ್ದಾಗಲೇ ಹೃದಯಾಘಾತಕ್ಕೊಳಗಾದ 64 ವರ್ಷದ ಸಂಪತ್ ಕುಮಾರ್ ಇಹಲೋಕ ತ್ಯಜಿಸಿದ್ದಾರೆ.

ತಮ್ಮ ತಂದೆ ವರದರಾಜ ಅಯ್ಯಂಗಾರ್ 1970 ರಲ್ಲಿ ಆರಂಭಿಸಿದ ‘ಸುಧರ್ಮಾ’ ಸಂಸ್ಕೃತ ಪತ್ರಿಕೆಯನ್ನು ಅವರ ನಿಧನದ ನಂತರ ಸಂಪತ್ ಕುಮಾರ್ ತಮ್ಮ ಪತ್ನಿ ವಿಜಯಲಕ್ಷ್ಮಿ ಅವರ ಜೊತೆಗೂಡಿ ಮುಂದುವರಿಸಿಕೊಂಡು ಬಂದಿದ್ದರು.

ಇವರ ಈ ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರ ಸಂಪತ್ ಕುಮಾರ್ ಹಾಗೂ ಅವರ ಪತ್ನಿ ಜಯಲಕ್ಷ್ಮಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಕಟಿಸಿತ್ತು. ಅಲ್ಲದೆ ಸಂಪತ್ ಕುಮಾರ್ ಅವರಿಗೆ ಅಬ್ದುಲ್ ಕಲಾಂ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿದ್ದವು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...