ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಿದ್ಧವಾಗಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ, ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ.
ಇನ್ನು ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಕಣಕ್ಕಿಳಿಯಲಿದ್ದು, ಹೀಗಾಗಿ ಅವರು ತೃಣಮೂಲ ಕಾಂಗ್ರೆಸ್ ಪಕ್ಷದ ತಮ್ಮ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಆದರೆ ಎನ್ ಡಿ ಎ ಮೈತ್ರಿಕೂಟ ತನ್ನ ಅಭ್ಯರ್ಥಿಯ ಗೆಲುವಿಗೆ ಬೇಕಾದಷ್ಟು ಮತಗಳನ್ನು ಹೊಂದಿದ್ದು, ಹೀಗಾಗಿ ದ್ರೌಪದಿ ಮುರ್ಮು ಅವರ ಆಯ್ಕೆ ಖಚಿತ ಎಂದು ಹೇಳಲಾಗಿದೆ. ಆದರೆ ಪ್ರತಿಪಕ್ಷಗಳು ಆತ್ಮಸಾಕ್ಷಿ ಮತ ಕೇಳಲು ನಿರ್ಧರಿಸಿದ್ದು, ಯಶವಂತ್ ಸಿನ್ಹಾ ಅವರ ಗೆಲುವಿನ ವಿಶ್ವಾಸವನ್ನು ಹೊಂದಿವೆ.