ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ರಂದು ಕೊನೆಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ನೂತನ ರಾಷ್ಟ್ರಪತಿ ಆಯ್ಕೆಗಾಗಿ ಜುಲೈ 18ರಂದು ಮತದಾನ ನಡೆಯಲಿದೆ.
ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆಯಲಿರುವ ಜುಲೈ 18 ರಿಂದಲೇ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಲಿದೆ ಎನ್ನಲಾಗಿದ್ದು, ಆಗಸ್ಟ್ 2ನೇ ವಾರದಲ್ಲಿ ಇದು ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.
ರಾಷ್ಟ್ರಪತಿ ಚುನಾವಣೆಗೆ ಮತ ಚಲಾಯಿಸಲು ಸಂಸದರಿಗೆ ಅನುಕೂಲವಾಗುವಂತೆ ಜುಲೈ 18 ರಿಂದಲೇ ಸಂಸತ್ತಿನ ಅಧಿವೇಶನ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.