ನವದೆಹಲಿಯ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್ಫೇರ್ ನೀಡುವ ರಾಷ್ಟ್ರೀಯ ಶೌರ್ಯ ಪ್ರಶಸ್ತಿಗೆ ಜಗಳೂರಿನ ಏಳನೇ ತರಗತಿ ವಿದ್ಯಾರ್ಥಿ ಕೀರ್ತಿ ವಿವೇಕ್ ಸಾಹುಕಾರ್ ಆಯ್ಕೆಯಾಗಿದ್ದು, ಈತ ಪಟ್ಟಣದ ಎನ್.ಕೆ. ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.
ಈತ ತನ್ನ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತವಾದ ಸಂದರ್ಭದಲ್ಲಿ ಧೃತಿಗೆಡದೆ ಗಂಭೀರವಾಗಿ ಗಾಯಗೊಂಡಿದ್ದ ತನ್ನ ತಂದೆ – ತಾಯಿಯನ್ನು ಕಾರಿನಿಂದ ಹೊರಗೆ ಕರೆ ತಂದಿದ್ದ. ಅಲ್ಲದೆ ಪೊಲೀಸರಿಗೆ ಕರೆ ಮಾಡಿ ಅಪಘಾತದ ಕುರಿತು ಮಾಹಿತಿ ನೀಡಿದ್ದ.
ಬಾಲಕನ ಧೈರ್ಯವನ್ನು ಮೆಚ್ಚಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಜನವರಿ 26ರಂದು ನವದೆಹಲಿಯಲ್ಲಿ ಪ್ರದಾನ ಮಾಡಲಾಗುತ್ತದೆ. ಕೀರ್ತಿ, ಜಗಳೂರಿನ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಶಿಕ್ಷಕ ಮಂಜುನಾಥ್ ಸಾಹುಕಾರ್ ಹಾಗೂ ಶೃತಿ ದಂಪತಿಯ ಪುತ್ರನಾಗಿದ್ದಾನೆ.