ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗತೊಡಗಿದ್ದು, ಶುಕ್ರವಾರ ಒಂದೇ ದಿನ 11 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲೂ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ.
ಶುಕ್ರವಾರದಂದು ಒಂದೂವರೆ ಸಾವಿರಕ್ಕೂ ಅಧಿಕ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲೆಗಳನ್ನು ಕನಿಷ್ಠ ಒಂದು ವಾರದ ಮಟ್ಟಿಗೆ ಮುಚ್ಚಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಶಿಕ್ಷಣ ಸಚಿವೆ ಅತಿಶಿ ಮರ್ಲೇನಾ ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಕೊರೊನಾ ಮಾರ್ಗಸೂಚಿಗಳನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚಳ ಇದೇ ರೀತಿ ಮುಂದುವರೆದರೆ ಶಾಲೆಗಳಿಗೆ ರಜೆ ನೀಡಲು ಉದ್ದೇಶಿಸಲಾಗಿದೆ.