ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ನಡೆಸುತ್ತಿರುವ ‘ಭಾರತ್ ಜೋಡೋ’ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ರಘುರಾಮ್ ರಾಜನ್ ಇದೀಗ ಮತ್ತೊಂದು ಮಹತ್ವದ ಹೇಳಿಕೆ ನೀಡಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ರಾಹುಲ್ ಗಾಂಧಿ ಒಬ್ಬ ಬುದ್ಧಿವಂತ ವ್ಯಕ್ತಿಯಾಗಿದ್ದಾರೆ. ಅಲ್ಲದೆ ಅವರಿಗೆ ತಮ್ಮ ಆದ್ಯತೆಗಳೇನು ಹಾಗೂ ಸಾಮರ್ಥ್ಯವೇನು ಎಂಬುದರ ಅರಿವಿದೆ. ಆದರೆ ಅವರನ್ನು ‘ಪಪ್ಪು’ ಎಂಬಂತೆ ಬಿಂಬಿಸುತ್ತಿರುವುದು ದುರದೃಷ್ಟಕರ ಎಂದು ರಘುರಾಮ್ ರಾಜನ್ ಹೇಳಿದ್ದಾರೆ.
ಅಲ್ಲದೆ ‘ಭಾರತ್ ಜೋಡೋ’ ಯಾತ್ರೆಯಲ್ಲಿ ತಾವು ಪಾಲ್ಗೊಂಡಿದ್ದನ್ನು ಬಲವಾಗಿ ಸಮರ್ಥಿಸಿಕೊಂಡಿರುವ ರಘುರಾಮ್ ರಾಜನ್, ನಾನು ಆ ಯಾತ್ರೆಯ ಆಶಯಗಳ ಪರವಾಗಿದ್ದೇನೆ. ಅಲ್ಲದೆ ರಾಹುಲ್ ಗಾಂಧಿ ಜೊತೆಗಿನ ಸಂಪರ್ಕದಿಂದ ಅವರ ಕುರಿತು ಅರಿತುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.