![](https://kannadadunia.com/wp-content/uploads/2022/09/ANI-202209241508.jpg)
ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ, ಜನಸಾಮಾನ್ಯರನ್ನು ಭೇಟಿ ಮಾಡುತ್ತಿರುವ ಹಲವಾರು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದೀಗ ‘ಭಾರತ್ ಜೋಡೋ’ ಯಾತ್ರೆಗೆ ಹಾಲಿವುಡ್ ನಟರೊಬ್ಬರು ಬೆಂಬಲ ವ್ಯಕ್ತಪಡಿಸಿದ್ದಾರೆ.
ನಟ ಜಾನ್ ಕುಸಾಕ್, ಭಾರತ್ ಜೋಡೋ ಯಾತ್ರೆಗೆ ಬೆಂಬಲ ಸೂಚಿಸಿದ್ದು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ಯಾತ್ರೆ ಮಾಡುತ್ತಿದ್ದಾರೆ. ಈ ಮೂಲಕ ಸರ್ವಾಧಿಕಾರಿ ಧೋರಣೆ ವಿರುದ್ಧ ಎಲ್ಲರನ್ನು ಒಗ್ಗೂಡಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.