
ಭಾರತದಲ್ಲಂತೂ ಬಹುತೇಕ ಎಲ್ಲಾ ಅಡುಗೆಗೂ ಕೊತ್ತಂಬರಿ ಸೊಪ್ಪು ಬಳಸುತ್ತೇವೆ. ಕೊತ್ತಂಬರಿ ಸೊಪ್ಪು ಇಲ್ಲದಿದ್ರೆ ಅಡುಗೆ ಮಾಡುವುದೇ ಕಷ್ಟ. ಯಾಕಂದ್ರೆ ತಿನಿಸುಗಳ ರುಚಿ ಅಪೂರ್ಣವಾಗುತ್ತದೆ. ಕೆಲವರು ಇದನ್ನು ಹಸಿಯಾಗಿ ಹಾಗೇ ತಿನ್ನಲು ಇಷ್ಟಪಡುತ್ತಾರೆ.
ಸಲಾಡ್‌ಗಳಲ್ಲಿ ಕೂಡ ಕೊತ್ತಂಬರಿ ಸೊಪ್ಪನ್ನು ಬೆರೆಸಬಹುದು. ಕೊತ್ತಂಬರಿ ಸೊಪ್ಪು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಕೊತ್ತಂಬರಿ ಸೊಪ್ಪಿನಲ್ಲಿ ವಿಟಮಿನ್ ಎ, ಬಿ, ಸಿ, ಕೆ, ಕ್ಯಾಲ್ಸಿಯಂ, ರಂಜಕ, ಪೊಟ್ಯಾಸಿಯಮ್, ಸೋಡಿಯಂ ಮತ್ತು ಮೆಗ್ನೀಸಿಯಮ್ ನಂತಹ ಪೋಷಕಾಂಶಗಳು ಕಂಡುಬರುತ್ತವೆ. ಈ ಪೋಷಕಾಂಶಗಳು ನಮ್ಮ ದೇಹವನ್ನು ಸದೃಢವಾಗಿಡುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಯಕೃತ್ತಿನ ಆರೋಗ್ಯ : ಕೊತ್ತಂಬರಿ ಸೊಪ್ಪು ಯಕೃತ್ತಿಗೆ ಸಂಬಂಧಪಟ್ಟ ಸಮಸ್ಯೆಗಳ ನಿವಾರಣೆಗೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕೊತ್ತಂಬರಿ ಸೊಪ್ಪು ಸಾಕಷ್ಟು ಪ್ರಮಾಣದ ಆಲ್ಕಲಾಯ್ಡ್‌ಗಳು ಮತ್ತು ಫ್ಲೇವನಾಯ್ಡ್‌ಗಳನ್ನು ಹೊಂದಿರುತ್ತದೆ. ಈ ಅಂಶಗಳು ಪಿತ್ತರಸ ಅಸ್ವಸ್ಥತೆಗಳು ಮತ್ತು ಕಾಮಾಲೆಯಂತಹ ಪಿತ್ತಜನಕಾಂಗದ ಕಾಯಿಲೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ.
ಜೀರ್ಣಕಾರಿ ಮತ್ತು ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ: ಕೊತ್ತಂಬರಿ ಸೊಪ್ಪನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯಲ್ಲಿನ ಅಡಚಣೆಗಳು ಮತ್ತು ಕರುಳಿನ ಕಾಯಿಲೆಗಳಿಂದ ಪರಿಹಾರ ಪಡೆಯಬಹುದು. ಹೊಟ್ಟೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕರಿಸುತ್ತದೆ.
ರೋಗ ನಿರೋಧಕ ಶಕ್ತಿ ಹೆಚ್ಚಳ: ಕೊತ್ತಂಬರಿ ಸೊಪ್ಪಿನಲ್ಲಿ ಎಂಟಿಒಕ್ಸಿಡೆಂಟ್‌ಗಳಿವೆ. ಸ್ವತಂತ್ರ ರಾಡಿಕಲ್ಗಳಿಂದ ಉಂಟಾಗುವ ಸೆಲ್ಯುಲಾರ್ ಹಾನಿಯನ್ನು ಇದು ತಡೆಯಬಲ್ಲದು. ಕೊತ್ತಂಬರಿ ಸೊಪ್ಪಿನ ನಿಯಮಿತ ಸೇವನೆಯು ದೇಹದ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಹೃದ್ರೋಗ ತಡೆಗಟ್ಟುತ್ತದೆ: ಕೊತ್ತಂಬರಿ ಸೊಪ್ಪನ್ನು ಸೇವಿಸುವುದರಿಂದ ಮೂತ್ರದ ಮೂಲಕ ದೇಹದಿಂದ ಅನಗತ್ಯವಾದ ಹೆಚ್ಚುವರಿ ಸೋಡಿಯಂ ಹೊರಹೋಗುತ್ತದೆ. ಇದರಿಂದಾಗಿ ದೇಹವು ಒಳಗಿನಿಂದ ಫಿಟ್ ಆಗಿ ಉಳಿಯುತ್ತದೆ. ಕೊತ್ತಂಬರಿ ಸೊಪ್ಪನ್ನು ಸೇವನೆ ಮಾಡುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಬಹುದು.
ರಕ್ತದಲ್ಲಿನ ಸಕ್ಕರೆ ಮಟ್ಟ ಇಳಿಕೆ: ಆಹಾರದಲ್ಲಿ ಕೊತ್ತಂಬರಿ ಸೊಪ್ಪಿನ ಬಳಕೆಯು ಕಿಣ್ವಗಳನ್ನು ಸಕ್ರಿಯಗೊಳಿಸುತ್ತದೆ. ಇದು ದೇಹದಲ್ಲಿನ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಈ ಕಾರಣದಿಂದಾಗಿ ಮಧುಮೇಹಿಗಳು ಇದನ್ನು ಸೇವಿಸಬಹುದು.