alex Certify ‘ರೇಮೊ’ ಚಿತ್ರದ ಮತ್ತೊಂದು ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರೇಮೊ’ ಚಿತ್ರದ ಮತ್ತೊಂದು ಹಾಡು ರಿಲೀಸ್

ಪವನ್ ಒಡೆಯರ್ ನಿರ್ದೇಶನದ ಇಶಾನ್  ಹಾಗೂ ಆಶಿಕಾ ರಂಗನಾಥ್ ಅಭಿನಯದ ಬಹುನಿರೀಕ್ಷಿತ ರೇಮೊ ಚಿತ್ರದ ಹೋದರೆ ಹೋಗು ಎಂಬ ಲಿರಿಕಲ್ ವಿಡಿಯೋವೊಂದನ್ನು ನಿನ್ನೆ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಶ್ರೇಯಾ ಘೋಷಾಲ್ ಧ್ವನಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಕವಿರಾಜ್ ಸಾಹಿತ್ಯ ಹಾಗೂ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

ಜಯದತ್ತ ಫಿಲ್ಮ್ ಬ್ಯಾನರ್ ನಡಿ ಸಿ ಆರ್ ಮನೋಹರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಸಿ ಆರ್ ಗೋಪಿ ಸಹ ನಿರ್ಮಾಪಕರಾಗಿದ್ದಾರೆ.

ಇತ್ತೀಚಿಗಷ್ಟೇ ಈ ಸಿನಿಮಾದ ‘ತಾರೆಯೊ ಕೋಟಿ ಚಂದಿರ ಒಂಟಿ’ ಎಂಬ ಹಾಡು ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ದೀಪಾವಳಿ ಹಬ್ಬದ ಪ್ರಯುಕ್ತ ಈ ಚಿತ್ರದ ಎರಡು ಹಾಡುಗಳು ರಿಲೀಸ್ ಆಗಿದ್ದು ಗಾನಪ್ರಿಯರಿಂದ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...