ಶಿವಮೊಗ್ಗ: ರೇಷ್ಮೆ ಇಲಾಖೆ ವತಿಯಿಂದ 2021-22 ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿ ನೀಡಲು ಉತ್ತಮ ಪ್ರಗತಿ ಸಾಧಿಸಿದ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಟ ಒಂದು ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆಗೂಡಿನ ಇಳುವರಿ 65 ಕೆ.ಜಿ ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್‍ಬುಕ್, ರೇಷ್ಮೆ ಮೊಟ್ಟೆ, ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲೆಗಳನ್ನು ಹೊಂದಿರಬೇಕು.
ಅರ್ಹರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು, ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿ ಮೊ.ಸಂ: 9917911112 ಇವರನ್ನು ಸಂಪರ್ಕಿಸಬಹುದೆಂದು ರೇಷ್ಮೆ ಉಪನಿರ್ದೇಶಕರು ತಿಳಿಸಿದ್ದಾರೆ.