alex Certify ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಇ-ಕೆವೈಸಿ ಮಾಡಿಸಲು ಇಂದೇ ಕೊನೆ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಇ-ಕೆವೈಸಿ ಮಾಡಿಸಲು ಇಂದೇ ಕೊನೆ ದಿನ

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ಈ ಕೂಡಲೇ ಮಾಡಿಸಬೇಕು.

ಈಗಾಗಲೇ ಈ ಯೋಜನೆಯಡಿ ರೈತರು ಆರ್ಥಿಕ ಸಹಾಯಧನ ಪಡೆಯುತ್ತಿದ್ದು, ಮುಂದಿನ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇ-ಕೆವೈಸಿ ಮಾಡದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ತಮ್ಮ ತಾಲ್ಲೂಕಿನ ಹತ್ತಿರದ ಸಿಎಸ್‍ಸಿ(ನಾಗರಿಕ ಸೇವಾ ಕೇಂದ್ರ) ಅಥವಾ http://pmkisan.gov.in ಪೋರ್ಟಲ್‍ನ ಫಾರ್ಮರ್ಸ್ ಕಾರ್ನರ್‍ನ ಇ-ಕೆವೈಸಿ ಅವಕಾಶದಡಿ ಆ. 31 ರೊಳಗಾಗಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...