ರೈತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕೃಷಿ ಆದಾಯ ದ್ವಿಗುಣಗೊಳಿಸುವ ಕುರಿತಂತೆ ಸಮಿತಿ ರಚನೆಗೆ ತೀರ್ಮಾನಿಸಲಾಗಿದ್ದು, ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ರಚನೆಯಾಗುವ ಈ ಸಮಿತಿಯಲ್ಲಿ ರೈತರು ಸಹ ಇರುತ್ತಾರೆ.
ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಬೆಂಗಳೂರಿನಲ್ಲಿ ಈ ವಿಷಯ ತಿಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವ ಕುರಿತಂತೆ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತದೆ ಎಂದು ಹೇಳಿದ್ದಾರೆ.
ಮೋದಿ ಮತ್ತೆ ಪ್ರಧಾನಿಯಾಗದಿದ್ದರೆ ದೇಶದ ಪರಿಸ್ಥಿತಿಯನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ: ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ
ಕೃಷಿ, ತೋಟಗಾರಿಕೆ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ, ಡೈರಿ ಉತ್ಪಾದನೆ ಹಾಗೂ ಗ್ರಾಮೀಣ ಮತ್ತು ಗುಡಿ ಕೈಗಾರಿಕೆಗಳ ಮೂಲಕ ರೈತರ ಆದಾಯ ದ್ವಿಗುಣಗೊಳಿಸುವುದರ ಜೊತೆಗೆ ಉದ್ಯೋಗ ಸೃಷ್ಟಿಗೂ ಸಹ ಒತ್ತು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.