ರೈತರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಕೃಷಿ ಬಳಕೆಗಾಗಿ ಹಗಲು ಹೊತ್ತಿನಲ್ಲಿ ನಿರಂತರ ವಿದ್ಯುತ್ ಪೂರೈಕೆಗೆ ಸಿದ್ಧತೆ ನಡೆಸಲಾಗಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರಧಾನಮಂತ್ರಿ ‘ಕುಸುಮ್’ ಯೋಜನೆಯಡಿ ಪ್ರತಿ ಐಪಿ ಸೆಟ್ ಗೆ ಸೋಲಾರ್ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ನೇರವಾಗಿ ಐಪಿ ಸೆಟ್ ಗೆ ಸೋಲಾರ್ ಅಳವಡಿಸುವ ಬದಲು ಫೀಡರ್ ನಲ್ಲಿ ಹಾಕುವ ಕಾರಣ ಇದರಿಂದ ಎರಡು ಲಕ್ಷ ರೈತರಿಗೆ ಸುಮಾರು 960 ಮೆಗಾವ್ಯಾಟ್ ವಿದ್ಯುತ್ ಉಳಿತಾಯವಾಗಲಿದೆ ಎಂದು ತಿಳಿಸಿದರು.
ಈಗಾಗಲೇ ಬೆಸ್ಕಾಂ ಹಾಗೂ ಎಸ್ಕಾಂ ಗಳಲ್ಲಿ ಸೋಲಾರ್ ಅಳವಡಿಕೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದ ಸಚಿವರು, ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇದೆ ಎಂದು ಕಾಂಗ್ರೆಸ್ ವೃಥಾ ಆರೋಪ ಮಾಡುತ್ತಿದೆ. ಅಂತಹ ಯಾವುದೇ ಪರಿಸ್ಥಿತಿ ಇಲ್ಲ ಎಂದು ನುಡಿದರು.