ಮೈಸೂರು: ಇತ್ತೀಚಿನ ದಿನಗಳಲ್ಲಿ ಸಿರಿಧಾನ್ಯಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಸರ್ಕಾರ ಕೂಡ ಸಿರಿ ಧಾನ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದೆ. ಸಿರಿಧಾನ್ಯ ಮೇಳಕ್ಕೆ ಮೈಸೂರಿನಲ್ಲಿ ಚಾಲನೆ ನೀಡಲಾಯಿತು. ಸಚಿವ ಬಿ.ಸಿ. ಪಾಟೀಲ್ ಸಿರಿಧಾನ್ಯ ಮೇಳಕ್ಕೆ ಚಾಲನೆ ನೀಡಿದರು. ಇನ್ನು ಬೆಂಗಳೂರಿನಲ್ಲಿ 20,21,23 ಕ್ಕೆ ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ನಡೆಯಲಿದೆ.
ಹೌದು, ಸಿರಿಧಾನ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ಸಿಗಬೇಕು ಅನ್ನೋ ನಿಟ್ಟಿನಲ್ಲಿ ಸಾಕಷ್ಟು ಕಾರ್ಯಕ್ರಮ ಹಾಕಿಕೊಂಡಿದೆ ಸರ್ಕಾರ. ಇನ್ನು ಸಿರಿಧಾನ್ಯ ಮೇಳಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಬಿ.ಸಿ. ಪಾಟೀಲ್, ಸಿರಿಧಾನ್ಯಗಳನ್ನು ಆಹಾರದಲ್ಲಿ ಹೆಚ್ಚಾಗಿ ಬಳಸುವುದರಿಂದ ಆರೋಗ್ಯ ವೃದ್ಧಿಯಾಗಲಿದೆ. ಜೊತೆಗೆ ಇತರೆ ಕಾಯಿಲೆಗಳಿಂದ ದೂರ ಇರಬಹುದು. ಸಿರಿಧಾನ್ಯವನ್ನು ಆಹಾರದಲ್ಲಿ ಬಳಸೋದ್ರಿಂದ ಆರೋಗ್ಯವಂತ ಮನುಷ್ಯನಾಗಿ ಇರಬಹುದು ಎಂದು ಹೇಳಿದ್ದಾರೆ.
ಇನ್ನು ಸಿರಿಧಾನ್ಯಗಳನ್ನು ಬೆಳೆಯುವ ರೈತರಿಗೆ ಸರ್ಕಾರದಿಂದ ಪ್ರತಿ ಹೆಕ್ಟೇರ್‌ಗೆ 10 ಸಾವಿರ ರೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದರು. ಈ ಮೂಲಕ ರೈತಾಪಿ ವರ್ಗದವರಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ ಬಿ.ಸಿ. ಪಾಟೀಲ್. ಹೊರ ದೇಶಗಳಲ್ಲಿಯೂ ಸಿರಿ ಧಾನ್ಯಗಳಿಗೆ ಹೆಚ್ಚಿನ ಬೇಡಿಕೆ ಇದೆ. ಹಾಗಾಗಿ ಹೆಚ್ಚಿನದಾಗಿ ಸಿರಿಧಾನ್ಯ ಬೆಳೆಯಿರಿ ಎಂದರು.