alex Certify ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬಗರ್ ಹುಕುಂ ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬಗರ್ ಹುಕುಂ ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ

Not my subject': Karnataka Minister JC Madhuswamy refuses to speak for  government in Assemblyಬಗರ್ ಹುಕುಂ ಸಾಗುವಳಿ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಈ ಹಿಂದೆಯೇ ರೈತರಿಗೆ ಅವಕಾಶ ಮಾಡಿಕೊಟ್ಟಿದೆ. ಇದೀಗ ಮತ್ತೊಮ್ಮೆ ಇದರ ಗಡುವು ವಿಸ್ತರಿಸುವ ಮೂಲಕ ರೈತರಿಗೆ ನೆಮ್ಮದಿ ನೀಡಲಾಗಿದೆ. ಗುರುವಾರದಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ರಾಜ್ಯ ಸರ್ಕಾರ ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಬಗರ್ ಹುಕುಂ ಸಾಗುವಳಿದಾರರಿಗೆ ಸಕ್ರಮಕ್ಕಾಗಿ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.

ಆದರೆ ಅನಕ್ಷರಸ್ಥರು, ಗ್ರಾಮೀಣ ಪ್ರದೇಶದ ಬಡ ರೈತರು, ಪರಿಶಿಷ್ಟ ಜಾತಿ – ಪಂಗಡ ಸಮುದಾಯದ ಬಹಳಷ್ಟು ಮಂದಿಗೆ ಅಕ್ರಮ -ಸಕ್ರಮಕ್ಕೆ ಅರ್ಜಿ ಸಲ್ಲಿಸುವ ಮಾಹಿತಿಯೇ ಇಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು 6 ತಿಂಗಳುಗಳ ಕಾಲ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...