ರೈತರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಎಸ್. ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿರುವ ಕೃಷಿ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ಯೋಜನೆಯನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ.
ಇಂಧನ ಸಚಿವ ವಿ. ಸುನಿಲ್ ಕುಮಾರ್, ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಈ ಕುರಿತಂತೆ ಮಾಹಿತಿ ನೀಡಿದ್ದು, ಬಂಗಾರಪ್ಪನವರು ರೈತರಿಗೆ ಉಚಿತ ವಿದ್ಯುತ್ ನೀಡುವ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿದ್ದರು ಎಂದು ಹೇಳಿದರು.
ಆ ಸಂದರ್ಭದಲ್ಲಿ ರೈತರು 3,000 ಕೋಟಿ ರೂಪಾಯಿ ಪ್ರೋತ್ಸಾಹ ಧನ ಪಡೆದಿದ್ದು, ಇಂದು ಸುಮಾರು 16 ಸಾವಿರ ಕೋಟಿ ರೂಪಾಯಿ ಪ್ರೋತ್ಸಾಹ ಧನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಅಲ್ಲದೆ ಸುಟ್ಟ ಟಿಸಿ ಗಳನ್ನು 24 ಗಂಟೆಗಳಲ್ಲಿ ಸಿದ್ಧಪಡಿಸುವ ಉದ್ದೇಶದಿಂದ ವಿದ್ಯುತ್ ಬ್ಯಾಂಕ್ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.