ರಾಯಚೂರು: 2022-23ನೇ ಸಾಲಿನ ರೈತ ಶಕ್ತಿ ಯೋಜನೆಯಡಿ ಕರ್ನಾಟಕ ಸರ್ಕಾರ ಕೃಷಿ ಉತ್ಪಾದಕತೆ ಹೆಚ್ಚಿಸಿ, ಇಂಧನ ಕಡಿಮೆ ಮಾಡುವ ದೃಷ್ಠಿಯಿಂದ ಪ್ರತಿ ಎಕರೆಗೆ 250 ರೂ.ಗಳಂತೆ ಗರಿಷ್ಟ 5 ಎಕರೆಗೆ 1250 ರೂ.ಗಳ ನೇರ ನಗದು ಮೂಲಕ ಡೀಸೆಲ್ ಸಹಾಯಧನ ನೀಡಲಾಗುತ್ತದೆ.
ಇಲ್ಲಿಯ ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದ ವತಿಯಿಂದ ರೈತ ಶಕ್ತಿ ಯೋಜನೆಯಡಿ ಸಹಾಯಧನ ಸೌಲಭ್ಯ ನೀಡಲಿದ್ದು, ಈ ಯೋಜನೆಯಡಿ ರೈತರು ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಲು ಕೃಷಿ, ಕಂದಾಯ, ರೇಷ್ಮೆ, ತೋಟಗಾರಿಕೆ ಮತ್ತು ಪಶು ಸಂಗೋಪನಾ ಇಲಾಖೆಗಳನ್ನು ಸಂಪರ್ಕಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.