ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ರೈತರ ಪರವಾಗಿರುವ ಕಾಯ್ದೆ ವಿರುದ್ಧ ಧರಣಿ ನಡೆಸುತ್ತಿರುವುದು ದುರ್ದೈವ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತಾನಡಿದ ಸಚಿವ ಬಿ.ಸಿ.ಪಾಟೀಲ್, ಕಾಂಗ್ರೆಸ್ ಪ್ರಾಣಾಳಿಕೆಯಲ್ಲಿ ನೀಡಿದ್ದ ಭರವಸೆಯನ್ನು ಇಂದು ನಾವು ಈಡೇರಿಸಿದ್ದೇವೆ. ಕಾಂಗ್ರೆಸ್ ನವರು ಕೃಷಿ ಕಾಯ್ದೆ ವಿರೋಧಿಸುವುದಾದರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದೂ ತಪ್ಪಾ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರೈತರ ಪ್ರತಿಭಟನೆಗೆ ಬೆಂಬಲ ನೀಡುತ್ತಿದ್ದಾರೆ. ರಾಹುಲ್ ರೈತರ ಭೂಮಿಯಲ್ಲಿ ಕಾಲಿಟ್ಟಿದ್ದಾರಾ…? ರೈತರು ಬೆಳೆಯುವ ಬೆಳೆಗಳ ಬಗ್ಗೆ ಅವರಿಗೆ ಏನಾದರೂ ಗೊತ್ತಾ? ಯಾರೋ ಹೇಳಿಕೊಟ್ಟಿದ್ದನ್ನು ಹೇಳುತ್ತಾರೆ ಅಷ್ಟೆ ಎಂದು ಕಿಡಿಕಾರಿದರು.