ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಅಡಿ ಸೌಲಭ್ಯ ಪಡೆಯಲು ಇ – ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಈ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲೂ ರೈತರು ಇ – ಕೆವೈಸಿ ಮಾಡಿಸಬಹುದಾಗಿದ್ದು, ಉಚಿತವಾಗಿ ಈ ಸೇವೆ ನೀಡುವ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದೆ.
ಸೆಪ್ಟೆಂಬರ್ 22ರ ಒಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದ್ದು, ರಾಜ್ಯದಲ್ಲಿ ಈವರೆಗೆ ಶೇಕಡಾ 56 ರಷ್ಟು ರೈತರು ಮಾತ್ರ ಇ ಕೆವೈಸಿ ಮಾಡಿಸಿದ್ದಾರೆ ಎನ್ನಲಾಗಿದೆ. ಉಳಿದ ಶೇಕಡ 44 ಮಂದಿ ನಿಗದಿತ ದಿನಾಂಕದೊಳಗೆ ಮಾಡಿಸದಿದ್ದರೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಸೌಲಭ್ಯ ಕಳೆದುಕೊಳ್ಳಲಿದ್ದಾರೆ.