ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ತೀವ್ರಗೊಳ್ಳುತಿದ್ದಂತೆಯೇ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕಿಡಿಕಾರಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಕೋಡಿಹಳ್ಳಿ ಚಂದ್ರಶೇಖರ್ ದುರುದ್ದೇಶದಿಂದ ಸಾರಿಗೆ ನೌಕರರನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಕೋಡಿಹಳ್ಳಿ ಚಂದ್ರಶೇಖರ್ ಪ್ರಚೋದನೆಯಿಂದಲೇ ಕೆಲ ಸಾರಿಗೆ ನೌಕರರು ರಾಜ್ಯದ ವಿವಿಧೆಡೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯುಂಟಾಗಲು ಅವರೇ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಯಡಿಯೂರಪ್ಪ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೋಡಿಹಳ್ಳಿ, ಎತ್ತಿಕಟ್ಟುವುದು ಎಂದರೇನು? ರಾಜ್ಯದ 4 ಸಾರಿಗೆ ನಿಗಮದ ನೌಕರರು ಸ್ವಯಂಪ್ರೇರಿತವಾಗಿ ಮುಷ್ಕರ ನಡೆಸಿದ್ದಾರೆ. ನಾನು ಯಾರನ್ನೂ ಮುಷ್ಕರ ನಡೆಸುವಂತೆ ಹೇಳಿಲ್ಲ. ಪ್ರಚೋದನೆಯನ್ನೂ ನೀಡಿಲ್ಲ ಎಂದು ತಿರುಗೇಟು ನೀಡಿದ್ದಾರೆ.