ಆಟೋ ಚಾಲಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ನಡೆದಿದೆ.
ಸಮೀಪದ ಲಕ್ಷ್ಮೇಶ್ವರ – ಕೆರೆಕಟ್ಟ ಎಂಬಲ್ಲಿಯ ನಿವಾಸಿ ಆದಿತ್ಯಕುಮಾರ್ ನಾಯ್ಕ(21) ಸಾವನ್ನಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಪ್ರೇಮ ವೈಫಲ್ಯದಿಂದಾಗಿಯೇ ಯುವಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
BIG BREAKING: ಸಿಎಂ ಸಂಧಾನ ಸಕ್ಸಸ್, ನಾಳಿನ ಕರ್ನಾಟಕ ಬಂದ್ ಮುಂದೂಡಿಕೆ
ಈ ಯುವಕ ಇತ್ತೀಚೆಗೊಮ್ಮೆ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದ್ದು, ಆ ಸಂದರ್ಭದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದ. ಎರಡನೇ ಬಾರಿ ಮತ್ತೊಮ್ಮೆ ಆತ್ಮಹತ್ಯೆಗೆ ಯತ್ನಿಸಿ ಅಂಕೋಲ ಹತ್ತಿರದ ಬಾಳೆಗುಳಿ ಹತ್ತಿರದಲ್ಲಿ ರೈಲಿಗೆ ತಲೆಕೊಟ್ಟು ಪ್ರಾಣ ಬಿಟ್ಟಿದ್ದಾನೆ.
ಈ ಯುವಕ ಆಟೋ ಚಲಾಯಿಸಿ ಜೀವನ ನಡೆಸುತ್ತಿದ್ದ. ಆದರೆ, ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪ್ರೇಮ ವೈಫಲ್ಯದಿಂದಲೇ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.