alex Certify ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ; ಪ್ರೇಮ ವೈಫಲ್ಯ ಕಾರಣ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ; ಪ್ರೇಮ ವೈಫಲ್ಯ ಕಾರಣ…?

ಆಟೋ ಚಾಲಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ನಡೆದಿದೆ.

ಸಮೀಪದ ಲಕ್ಷ್ಮೇಶ್ವರ – ಕೆರೆಕಟ್ಟ ಎಂಬಲ್ಲಿಯ ನಿವಾಸಿ ಆದಿತ್ಯಕುಮಾರ್ ನಾಯ್ಕ(21) ಸಾವನ್ನಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಪ್ರೇಮ ವೈಫಲ್ಯದಿಂದಾಗಿಯೇ ಯುವಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

BIG BREAKING: ಸಿಎಂ ಸಂಧಾನ ಸಕ್ಸಸ್, ನಾಳಿನ ಕರ್ನಾಟಕ ಬಂದ್ ಮುಂದೂಡಿಕೆ

ಈ ಯುವಕ ಇತ್ತೀಚೆಗೊಮ್ಮೆ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದ್ದು, ಆ ಸಂದರ್ಭದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದ. ಎರಡನೇ ಬಾರಿ ಮತ್ತೊಮ್ಮೆ ಆತ್ಮಹತ್ಯೆಗೆ ಯತ್ನಿಸಿ ಅಂಕೋಲ ಹತ್ತಿರದ ಬಾಳೆಗುಳಿ ಹತ್ತಿರದಲ್ಲಿ ರೈಲಿಗೆ ತಲೆಕೊಟ್ಟು ಪ್ರಾಣ ಬಿಟ್ಟಿದ್ದಾನೆ.

ಈ ಯುವಕ ಆಟೋ ಚಲಾಯಿಸಿ ಜೀವನ ನಡೆಸುತ್ತಿದ್ದ. ಆದರೆ, ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪ್ರೇಮ ವೈಫಲ್ಯದಿಂದಲೇ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...