ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಮಿಕ್ರಾನ್ ಹಾಗೂ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.
ಆದರೆ ಕೆಲ ಪ್ರಯಾಣಿಕರು ಕೋವಿಡ್ ಟೆಸ್ಟ್ ಗೆ ಹಿಂದೇಟು ಹಾಕುತ್ತಿದ್ದು, ಅಧಿಕಾರಿಗಳ ಜತೆ ಗಲಾಟೆ ನಡೆಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬಿಬಿಎಂಪಿ ಅಧಿಕಾರಿಗಳು ಪ್ರಯಾಣಿಕರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸುತ್ತಿದ್ದು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಯಾಣಿಕನೊಬ್ಬ ತಾನು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲ್ಲ ಎಂದು ಕಿರಿಕ್ ಮಾಡಿದ್ದು, ನನಗೆ ಈಗಾಗಲೇ 2 ಡೋಸ್ ಲಸಿಕೆ ಆಗಿದೆ. ಯಾವುದೇ ಕೋವಿಡ್ ಗುಣಲಕ್ಷಣಗಳೂ ನನ್ನಲ್ಲಿ ಇಲ್ಲ. ನಾನು ಆರಾಮವಾಗಿದ್ದೇನೆ. ಹೀಗಿರುವಾಗ ಮತ್ಯಾಕೆ ನಾನು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಗಲಾಟೆ ಮಾಡಿದ್ದಾನೆ. ಬಿಬಿಎಂಪಿ ಆರೋಗ್ಯಾಧಿಕಾರಿಗಳು ಪ್ರಯಾಣಿಕನ ವರ್ತನೆಗೆ ಅವಾಕ್ಕಾಗಿದ್ದಾರೆ.