alex Certify ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆಗೆ ಕಾಗಿನೆಲೆ ಸ್ವಾಮೀಜಿ ಆಕ್ಷೇಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆಗೆ ಕಾಗಿನೆಲೆ ಸ್ವಾಮೀಜಿ ಆಕ್ಷೇಪ

ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಗೆ ಕನ್ನಡಪರ ಸಂಘಟನೆಗಳೂ ಸೇರಿದಂತೆ ವಿವಿಧ ಸಮುದಾಯಗಳಿಂದ ಆಕ್ಷೇಪ ವ್ಯಕ್ತವಾಗಿದೆ. ಪಠ್ಯ ಪರಿಷ್ಕರಣೆ ವೇಳೆ ನಾಡಿನ ಮಹಾನ್ ಚೇತನಗಳ ವಿಚಾರಕ್ಕೆ ಅಪಚಾರವೆಸಗಲಾಗಿದೆ. ನಾಡು – ನುಡಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಈ ಹಿಂದಿನ ಪಠ್ಯ ಪುಸ್ತಕಗಳನ್ನೇ ಮುಂದುವರಿಸಬೇಕೆಂಬ ಕೂಗು ಕೇಳಿಬರುತ್ತಿದೆ.

ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಈಗಾಗಲೇ ಬೃಹತ್ ಪ್ರತಿಭಟನೆ ನಡೆಸಲಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಸೇರಿದಂತೆ ಹಲವು ಗಣ್ಯರು ಇದರಲ್ಲಿ ಪಾಲ್ಗೊಂಡಿದ್ದರು. ಆ ಬಳಿಕ ದೇವೇಗೌಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಪರಿಷ್ಕರಿಸಿದ ಪಠ್ಯವನ್ನು ರದ್ದುಪಡಿಸಿ ಕಳೆದ ವರ್ಷದ ಪಠ್ಯಗಳನ್ನೇ ಮುಂದುವರಿಸುವಂತೆ ಒತ್ತಾಯಿಸಿದ್ದರು.

ಇದೀಗ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಈಶ್ವರಾನಂದ ಪುರಿ ಸ್ವಾಮೀಜಿ ಹಾಗೂ ರಾಜನಹಳ್ಳಿ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಅವರು ಪಠ್ಯಪುಸ್ತಕ ಪರಿಷ್ಕರಣೆಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಭಕ್ತಿಪಂಥದ ಹರಿಕಾರ ಕನಕದಾಸರ ಬಗ್ಗೆ ಕೇವಲ ಒಂದೇ ಸಾಲಿನ ವಿವರಣೆ ನೀಡಿ ಅವರಿಗೆ ಅಗೌರವ ತೋರಿಸಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತ ಗೊಂದಲ ನಿವಾರಿಸದಿದ್ದರೆ ಹೋರಾಟ ಅನಿವಾರ್ಯ ಎಂದು ಉಭಯ ಸ್ವಾಮೀಜಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...