ಬೆಂಗಳೂರು: ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಹೆಚ್ ಎ ಐ ನ ಬೆಂಗಳೂರಿನ ಅಧಿಕಾರಿ ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ಸಿಬಿಐ ಬಂಧಿಸಿದೆ.
20 ಲಕ್ಷ ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಕಂಪನಿಯ ಜನರಲ್ ಮ್ಯಾನೇಜರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬೆಂಗಳೂರಿನ ಅಧಿಕಾರಿ ಸೇರಿದಂತೆ ನಾಲ್ವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.
ಪ್ರಕರಣ ಸಂಬಂಧ ಬೆಂಗಳೂರು, ದೆಹಲಿ, ಕೊಚ್ಚಿ, ಗುರಗಾಂವ್ ನಲ್ಲಿ ತನಿಖೆ ನಡೆಸಿದ್ದ ಅಧಿಕಾರಿಗಳು ಒಟ್ಟು 4 ಕೋಟಿ ಸಂಪತ್ತು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.