ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ನಿರಂತರವಾಗಿ ಮಳೆಯಾಗುತ್ತಿದೆ. ಶರಾವತಿ ಜಲಾಯನ ಪ್ರದೇಶದಲ್ಲೂ ಸಹ ವ್ಯಾಪಕ ಮಳೆಯಾಗುತ್ತಿದ್ದು, ಹೀಗಾಗಿ ಲಿಂಗನಮಕ್ಕಿ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ.
ಸೋಮವಾರ ಬೆಳಗ್ಗೆ 8ಗಂಟೆಗೆ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1875.25 ಅಡಿಗೆ ತಲುಪಿದ್ದು, ಜಲಾಶಯ ಭರ್ತಿಗೆ ಕೇವಲ 3.75 ಅಡಿ ನೀರು ಮಾತ್ರ ಬಾಕಿ ಇದೆ. ಮಳೆ ಇದೇ ರೀತಿ ಮುಂದುವರೆದಲ್ಲಿ ಜಲಾಶಯ ಭರ್ತಿಯಾಗಲಿದೆ.
ಜಲಾಶಯ ಭರ್ತಿಯಾದ ಬಳಿಕ ಸುರಕ್ಷತೆಯ ದೃಷ್ಟಿಯಿಂದ ನದಿಗೆ ನೀರು ಹರಿಸುವುದು ಅನಿವಾರ್ಯವಾಗಲಿದ್ದು, ಹೀಗಾಗಿ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಕರ್ನಾಟಕ ವಿದ್ಯುತ್ ನಿಗಮ ಮನವಿ ಮಾಡಿದೆ.