ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ನೂತನ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆ ಆರ್ ಪಿ ಪಿ) ವತಿಯಿಂದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ರಾಜ್ಯಾಧ್ಯಕ್ಷ ಜನಾರ್ದನ ರೆಡ್ಡಿ ಸ್ವತಃ ತಾವು ಗಂಗಾವತಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.
ಇದೀಗ ಕುಟುಂಬ ಸದಸ್ಯರೊಂದಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಅವರು, ಗುರುವಾರದಂದು ಹಾಸನ ಜಿಲ್ಲೆ ಬೇಲೂರಿನ ಚನ್ನಕೇಶವ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಮಹತ್ವದ ಮಾಹಿತಿ ನೀಡಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸ್ಪರ್ಧಿಸುವ ಕುರಿತಂತೆ ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗುತ್ತದೆ ಎಂದು ಹೇಳಿದ ಅವರು, 30 ಜಿಲ್ಲೆಗಳಲ್ಲಿ ಯಾವ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ನಿಲ್ಲಿಸಬೇಕು ಎಂಬ ಕುರಿತು ಆಗಸ್ಟ್ ನಲ್ಲಿ ನಡೆಯಲಿರುವ ಪಕ್ಷದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.