ಪಾಟ್ನಾ: ಮುಂಬರುವ ಲೋಕಸಭಾ ಚುನಾವಣೆಯನ್ನು ಎಲ್ಲಾ ವಿಪಕ್ಷ ನಾಯಕರು ಒಟ್ಟಾಗಿ ಎದುರಿಸುತ್ತೇವೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ತಿಳಿಸಿದ್ದಾರೆ.
ಪಾಟ್ನಾದಲ್ಲಿ ನಡೆದ ವಿಪಕ್ಷ ನಾಯಕರ ಸಭೆ ಅಂತ್ಯವಾಗಿದ್ದು, ಎಲ್ಲಾ ವಿಪಕ್ಷಗಳು ಚುನಾವಣೆಯನ್ನು ಒಟ್ಟಾಗಿ ಎದುರಿಸಲು ಒಪ್ಪಿದ್ದು, ವಿವರಗಳನ್ನು ಅಂತಿಮಗೊಳಿಸಲು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಮುಂದಿನ ತಿಂಗಳು ಮತ್ತೊಂದು ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಸೀಟು ಹಂಚಿಕೆ, ಪಕ್ಷವಾರು ವಿಭಜನೆ ವಿಚಾರ ಶಿಮ್ಲಾದಲ್ಲಿ ನಡೆಯಲಿರುವ ಜುಲೈ 10 ಅಥವಾ 12ರ ಸಭೆಯಲ್ಲಿ ಅಂತಿಮಗೊಳಿಸಲಾಗುವುದು ಎಂದರು.
ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್, ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ, ಉದ್ಧವ್ ಠಾಕ್ರೆ, ಜಾರ್ಖಂಡ್ ಸಿಎಮ್ ಶಿಬು ಸೊರೇನ್ ಸೇರಿದಂತೆ ಬಹುತೇಕ ವಿಪಕ್ಷ ನಾಯಕರು ಉಪಸ್ಥಿತರಿದ್ದರು.