ಆಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿದ್ದ ಅಮೆರಿಕ ಬೆಂಬಲಿತ ಸರ್ಕಾರವನ್ನು ಅಂತ್ಯಗೊಳಿಸಿ ತಾಲಿಬಾನ್ ಉಗ್ರರು ಅಧಿಕಾರಕ್ಕೇರಿದ್ದಾರೆ. ವಿಶ್ವಕ್ಕೆ ಕಂಟಕಪ್ರಾಯವಾಗಿರುವ ತಾಲಿಬಾನಿಗಳ ಕುರಿತು ಎಲ್ಲೆಡೆ ಕಳವಳ ವ್ಯಕ್ತವಾಗುತ್ತಿದೆ.
ಅಧಿಕಾರಕ್ಕೇರುವ ಸಂದರ್ಭದಲ್ಲಿ ತಾಲಿಬಾನಿಗಳು ಹಲವು ಆಶ್ವಾಸನೆಗಳನ್ನು ನೀಡಿದ್ದರು. ಈ ಪೈಕಿ ಕಾಶ್ಮೀರ ವಿಚಾರವು ಸಹ ಒಂದು. ಕಾಶ್ಮೀರ ಭಾರತದ ಆಂತರಿಕ ವಿಚಾರ, ಇದರಲ್ಲಿ ಮೂಗು ತೂರಿಸುವುದಿಲ್ಲ ಎಂದು ಹೇಳಿದ್ದ ತಾಲಿಬಾನಿಗಳು ಈಗ ಉಲ್ಟಾ ಹೊಡೆದಿದ್ದಾರೆ.
ಕಾಶ್ಮೀರದಲ್ಲಿನ ಮುಸ್ಲಿಮರ ಹಕ್ಕುಗಳ ಪರವಾಗಿ ನಾವು ದ್ವನಿ ಎತ್ತುತ್ತೇವೆ ಎಂದು ತಾಲಿಬಾನಿಗಳು ಹೇಳುವ ಮೂಲಕ ಮುಂದಿನ ದಿನಗಳಲ್ಲಿ ಭಾರತಕ್ಕೆ ಕಂಟಕಪ್ರಾಯವಾಗುವ ಸೂಚನೆ ನೀಡಿದ್ದಾರೆ. ಆದರೆ ಇದಕ್ಕೆ ಭಾರತವೂ ಸಹ ಖಡಕ್ ಎಚ್ಚರಿಕೆ ನೀಡಿದ್ದು, ಆಫ್ಘನ್ ನೆಲದಲ್ಲಿ ಕುಳಿತು ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವುದನ್ನು ನಾವು ಸಹಿಸುವುದಿಲ್ಲ ಎನ್ನುವ ಮೂಲಕ ಸ್ಪಷ್ಟ ಸಂದೇಶ ರವಾನಿಸಿದೆ.