ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಕಣಕ್ಕಿಳಿಯಲು ಬಯಸಿದ್ದ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸುರಕ್ಷಿತ ಕ್ಷೇತ್ರವೆನಿಸಿರುವ ವರುಣಾದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಕುರಿತ ವದಂತಿಗಳಿಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ, ಬೆಂಗಳೂರಿಗೆ ಹತ್ತಿರ ಎಂಬ ಕಾರಣಕ್ಕೆ ಕೋಲಾರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದರು. ಆದರೆ ಈಗ ವರಿಷ್ಠರು ಏನು ಹೇಳಿದ್ದಾರೆ ಎಂಬುದು ನನಗೆ ತಿಳಿದಿಲ್ಲ ಎಂದಿದ್ದಾರೆ.
ಮೈಸೂರು ತಾಲೂಕಿನ ಲಲಿತಾದ್ರಿಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ತೀರ್ಮಾನದಂತೆ ಅವರು ಸೂಚಿಸಿದ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ. ಯಾವ ಕ್ಷೇತ್ರದಿಂದ ಕಣಕ್ಕಿಳಿದರೂ ಅವರ ಗೆಲುವು ಖಚಿತ ಎಂದು ಹೇಳಿದ್ದಾರೆ.