ಮೇ 1ರ ಇಂದಿನಿಂದ ಜೂನ್ 15ರವರೆಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಕುರಿತು ಆದೇಶ ಹೊರಡಿಸಲಾಗಿದೆ. ವರ್ಗಾವಣೆ ಕುರಿತಂತೆ ಸರ್ಕಾರಿ ನೌಕರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ.
ಶೇಕಡಾ 6 ಮೀರದಂತೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದ್ದು, ಅಂದಾಜು 7 ರಿಂದ 8 ಸಾವಿರ ನೌಕರರಿಗೆ ವರ್ಗಾವಣೆ ಅವಕಾಶ ಸಿಗುವ ಸಾಧ್ಯತೆ ಇದೆ. ಪ್ರಮುಖ ಅಂಶವೆಂದರೆ ಈವರೆಗೆ ಎ ವರ್ಗದ ಅಧಿಕಾರಿಗಳನ್ನು ಮುಖ್ಯಮಂತ್ರಿಗಳೇ ವರ್ಗಾವಣೆ ಮಾಡುತ್ತಿದ್ದು, ಈ ಬಾರಿ ಸಚಿವರಿಗೂ ಅವಕಾಶ ಕಲ್ಪಿಸಲಾಗಿದೆ.
ಜೇಷ್ಠತೆ ಆಧಾರದಲ್ಲಿ ವರ್ಗಾವಣೆ ನಡೆಯಲಿದ್ದು, ಇದರ ಜೊತೆಗೆ ಆರೋಗ್ಯ ಸಮಸ್ಯೆ, ಕೋರಿಕೆ ವರ್ಗಾವಣೆಗೂ ಅವಕಾಶ ಸಿಗಲಿದೆ. ಇದರ ಮಧ್ಯೆ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸಬೇಕು ಎಂಬ ಬೇಡಿಕೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಇಟ್ಟಿದ್ದು, ಅಗತ್ಯವಿದ್ದರೆ ಮಾತ್ರ ಸಿಬ್ಬಂದಿಗಳನ್ನು ವರ್ಗಾವಣೆ ಮಾಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಮನವಿ ಮಾಡಿದ್ದಾರೆ.