ವರ್ಗಾವಣೆ ನಿರೀಕ್ಷೆಯಲ್ಲಿದ್ದ ಕಾಲೇಜು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜುಲೈ 16 ರ ನಾಳೆಯಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದ್ದು, ಸಾಮಾನ್ಯ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟವಾಗಲಿದೆ.
ಜುಲೈ 27 ರಿಂದ ಮೂರು ದಿನಗಳ ಕಾಲ ಕೌನ್ಸೆಲಿಂಗ್ ನಡೆಯಲಿದ್ದು, ಈ ಬಾರಿ ಬೋಧಕ ಹುದ್ದೆಗಳ ಪೈಕಿ ಶೇಕಡಾ 15ರಷ್ಟು ವರ್ಗಾವಣೆ ಮಾಡಲು ತೀರ್ಮಾನಿಸಲಾಗಿದೆ. ಈ ಪೈಕಿ ಶೇಕಡಾ 9 ರಷ್ಟು ಸಾರ್ವಜನಿಕ ಹಿತಾಸಕ್ತಿ ವರ್ಗಾವಣೆಯಾಗಿದ್ದರೆ ಇನ್ನೂ ಶೇಕಡ 6ರಷ್ಟು ವರ್ಗಾವಣೆ ವಿಶೇಷ ಪ್ರಕರಣಗಳಿಗೆ ಸಂಬಂಧಿಸಿದ್ದಾಗಿದೆ.
ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ‘ಬಂಪರ್’
ವಿಶೇಷ ವರ್ಗಾವಣೆ ಪ್ರಕರಣಗಳಲ್ಲಿ ವಿಕಲಚೇತನರು, ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವವರು, ವಿಧವೆಯರು, ಏಕ ಪೋಷಕರು, ವಿಚ್ಛೇದಿತ ಮಹಿಳೆಯರು, ಹಾಗೂ ಪತಿ-ಪತ್ನಿ ವಿಚಾರಗಳನ್ನು ಪರಿಗಣಿಸಲಾಗುತ್ತಿದ್ದು, ಈ ಕುರಿತು ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.