ಬೆಂಗಳೂರು: ಬಹುನಿರೀಕ್ಷಿತ ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕ-2021 ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ.
2019ರಲ್ಲಿ ಕಡ್ಡಾಯ ವರ್ಗಾವಣೆಗೆ ಒಳಗಾದವರಿಗೆ ಅವಕಾಶ ಕಲ್ಪಿಸಲಾಗಿದೆ. ಪ್ರಾಥಮಿಕ ಶಿಕ್ಷಕರು 2019- 20 ನೇ ಸಾಲಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲೆಯ ಮತ್ತು ತಾಲೂಕು ವ್ಯಾಪ್ತಿಯೊಳಗೆ ಒಂದು ಸಲ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ, ಪ್ರೌಢಶಾಲಾ ಶಿಕ್ಷಕರು 2019- 20 ರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಿಲ್ಲೆ ಮತ್ತು ವಿಭಾಗಿಯ ವ್ಯಾಪ್ತಿಯೊಳಗೆ ಒಂದು ಸಲ ವರ್ಗಾವಣೆಯಾಗಲು ಅವಕಾಶ ಕಲ್ಪಿಸಲಾಗಿದೆ.
10 ವರ್ಷ ಮೇಲ್ಪಟ್ಟ ಒಂದೇ ಕಡೆ ಸೇವೆ ಸಲ್ಲಿಸುತ್ತಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರನ್ನು 2019ರಲ್ಲಿ ಕಡ್ಡಾಯ ವರ್ಗಾವಣೆ ನಿಯಮದನ್ವಯ ವರ್ಗಾವಣೆ ಮಾಡಲಾಗಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಸಂದರ್ಭದಲ್ಲಿ ಒಂದು ಸಲ ವರ್ಗಾವಣೆಗೆ ಅವಕಾಶ ನೀಡುವ ಭರವಸೆ ನೀಡಿದ್ದು, ಅಂತೆಯೇ ವಿಧೇಯಕ ಮಂಡಿಸಲಾಗಿದೆ.
ಇದರೊಂದಿಗೆ ವರ್ಗಾವಣೆ ಪ್ರಕ್ರಿಯೆಗೆ ಮತ್ತೆ ಚಾಲನೆ ಸಿಗಲಿದೆ.ಸುಮಾರು 75000 ಶಿಕ್ಷಕರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.